ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಸರ್ಕಾರವು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿ ಎಂದು ಉದ್ದೇಶದಿಂದ ಅದರಲ್ಲಿಯೂ ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡಬೇಕೆನ್ನುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಸರ್ಕಾರವು ಆಹ್ವಾನ ಮಾಡಲಾಗಿದೆ. ಅದರಂತೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಏನೆಲ್ಲಾ ಅರ್ಹತೆಗಳು ಹಾಗೂ ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ವಿದ್ಯಾಸಿರಿ ವಿದ್ಯಾರ್ಥಿ ವೇತನ :
ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಕರ್ನಾಟಕ ಸರ್ಕಾರವು ಮೆಟ್ರಿಕ್ ನಂತರದ ಕೋಸುಗಳ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೀಡುತ್ತಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ನೀಡುವ ಉದ್ದೇಶದಿಂದ ಹಾಗೂ ಅವರು ವಿದ್ಯಾಭ್ಯಾಸವನ್ನು ಮುಂದುವರಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗವನ್ನು ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮುಖ್ಯ ಪ್ರಯೋಜನಗಳೇನೆಂದರೆ ವಿದ್ಯಾರ್ಥಿ ವೇತನ ಮತ್ತು ಶುಲ್ಕ ಮರುಪಾವತಿ ಹಾಗೂ ಊಟ ವಸತಿ ಸಹಾಯವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : ಸರ್ಕಾರಿ ಜಮೀನು ಉಳಿಮೆ ಮಾಡುತ್ತಿದ್ದರೆ ನಿಮಗೆ ಗುಡ್ ನ್ಯೂಸ್
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಮುಖ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಆಧಾರ್ ಕಾರ್ಡ್ ಮೊಬೈಲ್ ನಂಬರ್ ಇಮೇಲ್ ಐಡಿ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಸರ್ಕಾರದ ಎಸ್ ಎಸ್ ಬಿ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. https://ssp.postmatric.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಅರ್ಜಿ ಯನ್ನು 10-01-2024 ರ ಒಳಗಾಗಿ ಸಲ್ಲಿಸಬೇಕಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಇಲಾಖೆಯ ಸಹಾಯವಾಣಿ ಸಂಖ್ಯೆಯಾದ 8050770005 ಈ ಸಂಖ್ಯೆಗೆ ಕರೆ ಮಾಡಿ ತಿಳಿದುಕೊಳ್ಳಬಹುದು.
ಹೀಗೆ ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ಬಗ್ಗೆ ನಿಮಗೆ ತಿಳಿದಿರುವ ವರ್ಗಗಳ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.