ನಮಸ್ಕಾರ ಸ್ನೇಹಿತರೆ ಮಹಿಳೆಯರಿಗಾಗಿ ರಾಜ್ಯ ಸರ್ಕಾರವು ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಮಹಿಳೆಯರು ವ್ಯವಹಾರವನ್ನು ಈ ಯೋಜನೆಯ ಅಡಿಯಲ್ಲಿ ಪ್ರಾರಂಭಿಸುವುದರ ಮೂಲಕ ಆರ್ಥಿಕವಾಗಿ ಪ್ರಬಲರಾಗಬಹುದು. ರಾಜ್ಯ ಸರ್ಕಾರದ ಈ ಯೋಜನೆಯ ಮುಖ್ಯ ಉದ್ದೇಶ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಬೇಕೆಂಬುದಾಗಿದೆ.
ಮಹಿಳೆಯರಿಗೆ ಆರ್ಥಿಕ ಚಟುವಟಿಕೆಗಳಿಗೆ ಸಹಾಯಧನ :
ಪರಿಶಿಷ್ಟ ವರ್ಗದ ಮಹಿಳೆಯರಿಗೆ ರಾಜ್ಯ ಸರ್ಕಾರವು ಕಿರು ಆರ್ಥಿಕ ಚಟುವಟಿಕೆಗಳಿಗೆ ಈ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನವನ್ನು ನೀಡುತ್ತಿದೆ. ಕನಿಷ್ಠ 10 ಸದಸ್ಯರನ್ನು ಪರಿಶಿಷ್ಟ ವರ್ಗದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಈ ಯೋಜನೆಯನ್ನು ನೀಡಲಾಗುತ್ತಿದ್ದು 2.50 ಲಕ್ಷ ರೂಪಾಯಿಗಳನ್ನು ಈ ಯೋಜನೆಗೆ ರಾಜ್ಯ ಸರ್ಕಾರವು ಮಂಜೂರು ಮಾಡಿದೆ. ಅದರಲ್ಲಿ ಮಹಿಳೆಯರು ಒಂದು ಲಕ್ಷದವರೆಗೆ ಸಾಲವನ್ನು ಹಾಗೂ 1. 50 ಲಕ್ಷದವರೆಗೆ ಸಹಾಯಧನವನ್ನು ಪಡೆಯಬಹುದಾಗಿದೆ.
ಆಗತ್ಯವಿರುವ ದಾಖಲೆಗಳು ಹಾಗೂ ಅರ್ಹತೆಗಳು :
ರಾಜ್ಯ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕು. ವಯಸ್ಸು 21ರಿಂದ ಅರವತ್ತು ವರ್ಷಗಳವರೆಗೆ ಅರ್ಜಿದಾರರು ಹೊಂದಿರಬೇಕು. ಈ ಯೋಜನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಗುಂಪಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ವಾರ್ಷಿಕ ಕುಟುಂಬದ ಆದಾಯವು ಒಂದು ಪಾಯಿಂಟ್ ಐದು ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಹಾಗೂ ವಾರ್ಷಿಕ 2 ಲಕ್ಷ ಆದಾಯವು ಪಟ್ಟಣ ಪ್ರದೇಶದವರಿಗೆ ನಿಗದಿಪಡಿಸಲಾಗಿದೆ.
ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ : ಗ್ರಾಮ ಪಂಚಾಯಿತಿಯಲ್ಲಿ ಏನೆಲ್ಲ ಸೇವೆಗಳು ಲಭ್ಯವಿದೆ ಎಲ್ಲ ಸಂಪೂರ್ಣ ಸೇವೆಗಳ ಪಟ್ಟಿ ಇಲ್ಲಿ ನೋಡಿ
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರದ ಈ ಯೋಜನೆಗೆ ಮಹಿಳೆಯರು ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://adcl.karnataka.gov.in ಹಾಗೂ https://sevasindhuservices.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಹ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ವಿಶೇಷವಾಗಿ ಆರ್ಥಿಕವಾಗಿ ಸದೃಢ ಆಗಬೇಕೆಂಬ ಉದ್ದೇಶದಿಂದ ಈ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಎಸ್ಸಿ ಎಸ್ಟಿ ಸಮುದಾಯದ ಮಹಿಳೆಯರಿಗೆ ಹಾಗೂ ಸ್ವಸಹಾಯ ಗುಂಪುಗಳಿಗೆ ಶೇರ್ ಮಾಡಿ ಧನ್ಯವಾದಗಳು