rtgh

SBI ನಿಂದ 10,000 ವರೆಗೆ ವಿದ್ಯಾರ್ಥಿವೇತನ : ಈ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರರಿಂದ 12ನೇ ತರಗತಿಯ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಹಾಗೂ ಶಿಕ್ಷಣವನ್ನು ಪೋಷಿಸುವ ಮತ್ತು ಯುವ ಪ್ರತಿಭೆಗಳನ್ನು ಪೋಷಿಸುವ ಮಹತ್ವದ ಹೆಜ್ಜೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಏನೆಲ್ಲ ದಾಖಲೆಗಳು ಬೇಕು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

Scholarship up to 10,000 from SBI
Scholarship up to 10,000 from SBI

ಎಸ್ ಬಿ ಐ ವಿದ್ಯಾರ್ಥಿ ವೇತನ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ ಉದ್ದೇಶದಿಂದ ಎಸ್ ಬಿ ಐ ಆಶಾ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಿಗಾಗಿ 2023ರಲ್ಲಿ ಪ್ರಾರಂಭಿಸಿದೆ. ಭಾರತದ ಅತ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್‌ಬಿಐ ಫೌಂಡೇಶನ್ ನ ಶಿಕ್ಷಣ ವರ್ಟಿಕಲ್ ಇಂಟಿಗ್ರೇಟೆಡ್ ಭಾಗವಾಗಿರುವ ಈ ಉಪಕ್ರಮವು ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.

ವಿದ್ಯಾರ್ಥಿ ವೇತನ ಪಡೆಯಲು ಇರುವ ಅರ್ಹತೆಗಳು :

ಎಸ್ ಬಿ ಐ ಫೌಂಡೇಶನ್ ಇಂದ ವಿದ್ಯಾರ್ಥಿ ವೇತನವನ್ನು ಕೇವಲ ಆರರಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಕಲ್ಪಿಸಲಾಗಿದ್ದು ಕನಿಷ್ಠ ಶೇಕಡ 75% ರಷ್ಟು ಅಂಕಗಳನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಡೆದಿರಬೇಕು. ಈ ವಿದ್ಯಾರ್ಥಿ ವೇತನಕ್ಕೆ ಭಾರತದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅಭ್ಯರ್ಥಿಗಳ ಕುಟುಂಬದ ಆದಾಯವು 3 ಲಕ್ಷಕ್ಕಿಂತ ಹೆಚ್ಚಿರಬಾರದು.

ಅರ್ಜಿ ಸಲ್ಲಿಸುವ ವಿಧಾನ :

ಎಸ್ ಬಿ ಐ ವಿದ್ಯಾರ್ಥಿ ವೇತನದ ಅಡಿಯಲ್ಲಿ ಪ್ರತಿ ವಿದ್ಯಾರ್ಥಿಗೆ 10,000ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://www.sbifoundation.in/focus-area-detail/SBIF-Asha-Scholarship ಈ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಸಂಯೋಜನೆಯನ್ನು ಈ ವಿದ್ಯಾರ್ಥಿ ವೇತನದ ಆಯ್ಕೆಯು ಹೊಂದಿದ್ದು ಅರ್ಹತ ಮಾನದಂಡಗಳ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಹೀಗೆ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಾರಂಭಿಸಲಾಗಿದ್ದು ಈ ವಿದ್ಯಾರ್ಥಿ ವೇತನದ ಮೂಲಕ ವಿಷ್ಯದ ಪೀಳಿಗೆಗೆ ಶಿಕ್ಷಣ ನೀಡಲು ಎಸ್‌ಬಿಐ ಪ್ರಯತ್ನಿಸುತ್ತಿದೆ. ಈ ವಿದ್ಯಾರ್ಥಿ ವೇತನದಿಂದ ಶಾಲಾ ಮಕ್ಕಳು ಹಣಕಾಸಿನ ನಿರ್ಬಂಧಗಳಿಂದ ಅವರಿಗೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂದು ಇದು ಖಚಿತಪಡಿಸುತ್ತದೆ. ಹಾಗಾಗಿ ಎಸ್‌ಬಿಐ ವಿದ್ಯಾರ್ಥಿ ವೇತನವನ್ನು ನಿಮಗೆ ತಿಳಿದಿರುವ ಯಾರಾದರೂ ಆರರಿಂದ 12ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

Leave a Comment